ಬೆಂಗಳೂರು, ಜೂ.12- ಖಾತೆ ಬದಲಾವಣೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಮ್ಮತಿಸಿದ್ದು, ಇನ್ನೆರಡು, ಮೂರು ದಿನಗಳಲ್ಲಿ ತಮ್ಮ ಖಾತೆ ಬದಲಾವಣೆ ಆಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ತಮಗೆ ಉನ್ನತ ಶಿಕ್ಷಣಕ್ಕೆ ಬದಲಾಗಿ ಜನರಿಗೆ ಹತ್ತಿರವಿರುವ ಖಾತೆ ಕೊಡುವಂತೆ ಮನವಿ ಮಾಡಿರುವುದಾಗಿ ಹೇಳಿದರು.
ಬಜೆಟ್‍ನಲ್ಲಿ ಕುಡಿಯುವ ನೀರಿಗೆ ಹೆಚ್ಚು ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಜತೆ ಪ್ರಸ್ತಾಪಿಸಿರುವಂತೆ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.






