ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ

 

ಬೆಂಗಳೂರು, ಜೂ.12- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಿನ್ನೆಯಿಂದಲೇ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದ್ದು, ಸಂಸ್ಕರಣಾ ಶುಲ್ಕ ಹಾಗೂ ಅಪಘಾತ ಪರಿಹಾರ ನಿಧಿ ಸೇರಿ 150 ರೂ.ಗಳನ್ನು ಮಾತ್ರ ಪಾವತಿಸಬೇಕಿದೆ.

ಈ ವರ್ಗದ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಪಡೆಯಲು ಅರ್ಜಿಯ ಜತೆಗೆ ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಲಗತ್ತಿಸಿರಬೇಕು.
ಇತರೆ ವರ್ಗದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು 1050ರೂ.ಗಳನ್ನು ಪಾವತಿಸಿ ಪಾಸ್‍ಗಳನ್ನು ಪಡೆಯಬಹುದಾಗಿದೆ.
ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೇ ತಿಂಗಳಿನಲ್ಲೇ ತರಗತಿಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಕಳೆದ ವರ್ಷದ ಪಾಸನ್ನು ತೋರಿಸಿ ಜೂನ್ ಅಂತ್ಯದವರೆಗೂ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ನಿಗಮದ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಹಾಗೂ ವೆಬ್‍ಸೈಟ್ ನಲ್ಲಿ ಪಾಸ್ ಅರ್ಜಿಗಳನ್ನು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಕಾಲೇಜುಗಳಲ್ಲಿ ದೃಢೀಕರಿಸಬೇಕು.
ಸಂಬಂಧಪಟ್ಟ ಕಾಲೇಜುಗಳ ಮುಖಾಂತರವೇ ಪಾಸ್‍ಗಳನ್ನು ವಿತರಿಸಲಾಗುತ್ತದೆ. ವಿದ್ಯಾರ್ಥಿಗಳು ನೇರವಾಗಿ ಪಾಸ್ ಕೌಂಟರ್‍ಗೆ ಬರುವ ಅವಶ್ಯಕತೆ ಇಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ