ರಾಜ್ಯ ಒಕ್ಕಲಿಗರ ಸಂಘದ ನೌಕರರ ಪ್ರತಿಭಟನೆ

 

ಬೆಂಗಳೂರು, ಜೂ.12- ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಒಕ್ಕಲಿಗರ ಸಂಘದ ನೌಕರರು ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿ ಆಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ರಾಜ್ಯ ಒಕ್ಕಲಿಗರ ಸಂಘದ ಎಂಪ್ಲಾಯಿಸ್ ಅಸೋಸಿಯೇಷನ್ ಹಲವಾರು ಬೇಡಿಕೆ ಮನವಿಗಳನ್ನು ಸಲ್ಲಿಸಿದರೂ ಸಹ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ. ಹಾಲಿ ನೌಕರರ ಬೇಡಿಕೆಗಳನ್ನು ಈಡೇರಿಸದೆ ತಮ್ಮ ಮನಸೋ ಇಚ್ಛೆಯಂತೆ ಹೊಸದಾಗಿ ನೌಕರರನ್ನು ನೇಮಕ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಒಕ್ಕಲಿಗರ ಸಂಘ ಅವನತಿಯ ಅಂಚಿಗೆ ಸಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಸಂಘದ ಎಲ್ಲಾ ನಿರ್ದೇಶಕರ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿ 6ನೆ ವೇತನ ಆಯೋಗ ಜಾರಿಗೆ ಒತ್ತಾಯಿಸಿದರು.
ಇದೇ ವೇಳೆ ಸ್ಥಳಕ್ಕಾಗಮಿಸಿದ ಅಧ್ಯಕ್ಷ ಬೆಟ್ಟಗೌಡ ಅವರಿಗೆ ನೌಕರರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ