ಹಾಡಹಗಲೇ ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಕಳ್ಳರು ಬೀರುವಿನಲ್ಲಿದ್ದ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೊಚಿ ಪರಾರಿ

 

ಬೆಂಗಳೂರು, ಜೂ.12- ಹಾಡಹಗಲೇ ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಕಳ್ಳರು ಬೀರುವಿನಲ್ಲಿದ್ದ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದೊಯ್ದಿರುವ ಘಟನೆ ಗಿರಿನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಎಸ್‍ಬಿಎಂ ಕಾಲೋನಿಯ ಸೀತಾ ಸರ್ಕಲ್ ನಿವಾಸಿ ಮಂಜುಳಾ ಎಂಬುವವರು ನಿನ್ನೆ ಬೆಳಗ್ಗೆ 9 ಗಂಟೆಯಲ್ಲಿ ಮನೆಗೆ ಬೀಗ ಹಾಕಿಕೊಂಡು ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು.
ಈ ವೇಳೆ ಕಳ್ಳರು ಇವರ ಮನೆಯ ಬೀಗ ಒಡೆದು ಒಳನುಗ್ಗಿ ಬೀರುವನ್ನು ಮೀಟಿ ಅದರಲ್ಲಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ ಕೈಗೆ ಸಿಕ್ಕ 2.50 ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ರಾತ್ರಿ 8 ಗಂಟೆಯಲ್ಲಿ ಮಂಜುಳಾ ಮನೆಗೆ ವಾಪಸಾದಾಗಲೇ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ತಕ್ಷಣ ಗಿರಿನಗರ ಪೆÇಲೀಸರಿಗೆ ವಿಷಯ ತಿಳಿಸಿದ್ದು, ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಪೆÇಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ