
ಲಕ್ನೋ,ಜೂ.13
ಖಾಸಗಿ ಬಸ್ಸೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟು, 35ಕ್ಕೂ ಹೆಚ್ಚು ಮಂದಿಗೆ ಗಾಯಗಳಾದ ಘಟನೆ ಉತ್ತರಪ್ರದೇಶದ ಮಣಿಪುರಿ ಜಿಲ್ಲೆಯಲ್ಲಿ ಇಂದು ನಡೆದಿದೆ.
ಘಟನೆಯಲ್ಲಿ ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ ಎಂಬುದಾಗಿ ವರದಿಯಾಗಿದೆ. ಇನ್ನು ಘಟನೆಗೆ ಕಾರಣವೇನೆಂದು ತಿಳಿದುಬಂದಿಲ್ಲ.
ಪ್ರಾಥಮಿಕ ತನಿಖೆಯಲ್ಲಿ ಘಟನೆಗೆ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಕಾರಣ ಎನ್ನಲಾಗುತ್ತಿದೆ. ವೇಗವಾಗಿ ಬಂದ ಬಸ್ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿದೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಚಾಲಕನಿಗೂ ಗಾಯಗಳಾಗಿವೆ. ಸದ್ಯ ಚಾಲಕ ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಚಾಲಕನಿಂದ ಹೇಳಿಕೆ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರಿಗೆ ಸಂತಾಪ ಸೂಚಿಸಿದ್ದು, ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಅಂತ ಸಾಂತ್ವಾನ ಹೇಳಿದ್ದಾರೆ.
ಸ್ಥಳೀಯ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಗಾಯಾಳುಗಳನ್ನು ಕೂಡಲೇ ಸ್ಥಳಕ್ಕೆ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.