ಬೆಂಗಳೂರು:ಜೂ-14: ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳಿನಿಂದ ಜೈಲುವಾಸ ಅನುಭವಿಸಿದ್ದ ಆರೋಪಿ ಮೊಹಮದ್ ನಲಪಾಡ್ ಹ್ಯಾರಿಸ್ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಅರ್ಜಿ ವಿಚಾರಣೆ ಯನ್ನು ಹೈಕೋರ್ಟ್ ಬುಧವಾರ ಪೂರ್ಣಗೊಳಿಸಿತ್ತು. 2 ಲಕ್ಷ ರೂಪಾಯಿ ಬಾಂಡ್, 2 ಶ್ಯೂರಿಟಿಯನ್ನು ಪಡೆದು ಜಾಮೀನು ನೀಡಿದೆ.
ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠದ ಮುಂದೆ ನಲಪಾಡ್ ಪರ ಹಿರಿಯ ವಕೀಲ ಬಿ.ವಿ.ಆಚಾರ್ಯ ಹಾಗೂ ಪ್ರಾಸಿಕ್ಯೂಶನ್ ಪರ ವಿಶೇಷ ಅಭಿಯೋಜಕ ಶ್ಯಾಮ್ಸುಂದರ್ ಅವರ ವಾದ-ಪ್ರತಿವಾದ ನಡೆಸಿದ್ದರು.
bail granted,mohammad nalapad harris