ಶಾಲೆಯೊಂದರ ಬಳಿ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Execution Sling Hanging Hangman Knot Penalty Rope

ಮಂಡ್ಯ, ಜೂ.14-ಶಾಲೆಯೊಂದರ ಬಳಿ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರೆಗೋಡು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೂಲತಃ ಮದ್ದೂರು ತಾಲ್ಲೂಕಿನ ನಂಬಿನಾಯಕನಹಳ್ಳಿ ಗ್ರಾಮದ ಶಿಲ್ಪಶ್ರೀ(19) ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ. ಕಳೆದ ನಾಲ್ಕು ತಿಂಗಳ ಹಿಂದೆ ಮಂಡ್ಯದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಶಿಲ್ಪಶ್ರೀ ತಾಲ್ಲೂಕಿನ ಹಲ್ಲೆಗೆರೆಯ ಯುವಕನನ್ನು ಮದುವೆಯಾಗಿದ್ದಳು. ದಂಪತಿ ಅನ್ಯೋನ್ಯವಾಗಿಯೇ ಇದ್ದರು ಎನ್ನಲಾಗಿದೆ. ಆದರೆ ತಡರಾತ್ರಿ ಮನೆಯಿಂದ ಹೊರಬಂದು ಹಲ್ಲೆಗೆರೆಯ ಶಾಲೆ ಬಳಿ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇಂದು ಬೆಳಗ್ಗೆ ಈ ಮಾರ್ಗದಲ್ಲಿ ತೆರಳುತ್ತಿದ್ದ ಗ್ರಾಮಸ್ಥರೊಬ್ಬರು ಗಮನಿಸಿ ತಕ್ಷಣ ಪೆÇಲೀಸರಿಗೆ ತಿಳಿಸಿದ್ದಾರೆ. ಕೆರಗೋಡು ಠಾಣೆ ಪೆÇಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಶವವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ