
ಬೆಂಗಳೂರು, ಜೂ.15-ದರೋಡೆ ಪ್ರಕರಣವೊಂದರಲ್ಲಿ ಮಹಾಲಕ್ಷ್ಮಿ ಲೇಔಟ್ ಠಾಣೆ ಪೆÇಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅತ್ಯಾಚಾರವೊಂದು ಬೆಳಕಿಗೆ ಬಂದಿದೆ.
ಬೆಂಗಳೂರು ನಗರದಿಂದ ಯುವತಿಯೊಬ್ಬಳನ್ನು ಈ ಮೂವರು ಮಂಡ್ಯ ಬಳಿ ಕರೆದೊಯ್ದು ಅತ್ಯಾಚಾರ ಮಾಡಿ ಸರ ಕಿತ್ತುಕೊಂಡು ಪರಾರಿಯಾಗಿದ್ದುದು ವಿಚಾರಣೆಯಿಂದ ತಿಳಿದುಬಂದಿದೆ.
ನಗರದಲ್ಲಿ ನಡೆದಿದ್ದ ಮೊಬೈಲ್ ದರೋಡೆ ಪ್ರಕರಣದಲ್ಲಿ ಮೂವರು ದರೋಡೆಕೋರರನ್ನು ವಶಕ್ಕೆ ಪಡೆದು ಮಹಾಲಕ್ಷ್ಮಿ ಲೇಔಟ್ ಠಾಣೆ ಪೆÇಲೀಸರು ವಿಚಾರಣೆಗೊಳಪಡಿಸಿದಾಗ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದುದಾಗಿ ಬಾಯಿಬಿಟ್ಟಿದ್ದಾರೆ.
ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲಾಗಿದೆ.