ಆತಂಕ ಬೇಡ, ಶೀಘ್ರವೇ ಸಾಲಮನ್ನಾ: ಸಿಎಂ ಕುಮಾರಸ್ವಾಮಿ ಟ್ವೀಟ್

ಬೆಂಗಳೂರು: ಅತೀ ಶೀಘ್ರದಲ್ಲಿ ಸಾಲಮನ್ನಾ ಬಗ್ಗೆ ಘೋಷಿಸಲಾಗುವುದು. ಈ ಕುರಿತು ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಶುಕ್ರವಾರ ಟ್ವೀಟ್​ ಮಾಡಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 24 ಗಂಟೆಯೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ಎಚ್​ಡಿಕೆ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ್ದರು. ಆದರೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದಲೂ ಇಲ್ಲಿಯವರೆಗೂ ಸಾಲಮನ್ನಾ ಮುಂದೂಡುತ್ತಲೇ ಬಂದಿದ್ದು ಈಗ ಅಧಿಕೃತವಾಗಿ ಟ್ವೀಟ್​ ಮಾಡುವ ಮೂಲಕ ರೈತರಿಗೆ ಭರವಸೆ ನೀಡಿದ್ದಾರೆ.

ರೈತ ಬಾಂಧವರೇ, ಸಾಲ ಮನ್ನಾ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ. ಅತ್ಯಂತ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಈ ಪ್ರಯೋಜನ ಸಿಗಬೇಕು ಎನ್ನುವ ಉದ್ದೇಶ ನನ್ನದು. ನಾನು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಅತಿ ಶೀಘ್ರದಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇನೆ ಎಂದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ