ದೊಡ್ಡ ಬಿದರ ಕಲ್ಲು ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ದಿಢೀರ್ ಭೇಟಿ

 

ಬೆಂಗಳೂರು ,ಜೂ.15-ದೊಡ್ಡ ಬಿದರ ಕಲ್ಲು ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಿಬಿಎಂಪಿ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಘಟಕಕ್ಕೆ ಭೇಟಿ ನೀಡಿದ ಅವರು, ತ್ಯಾಜ್ಯ ಸಂಸ್ಕರಣಾ ಘಟಕದ ಸ್ಥಿತಿಗತಿಗಳ ಬಗ್ಗೆ ತಪಾಸಣೆ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಡ ಬಿದರಕಲ್ಲು ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ನಿತ್ಯ 130 ಟನ್ ತ್ಯಾಜ್ಯ ಸಂಸ್ಕರಣೆ ನಡೆಯುತ್ತಿದೆ. ಇದರಿಂದ ಹರಡುವ ವಾಸನೆ ಪ್ರಮಾಣವು ಕಡಿಮೆ ಇದೆ. ಹಾಗಾಗಿ ಜನರಿಗೆ ವಾಸನೆಯಿಂದಾಗುವ ಸಮಸ್ಯೆ ಬಗೆಹರಿಯಲಿದೆ ಎಂದರು.
ಈ ಪ್ರದೇಶದಲ್ಲಿ 200 ಮೀಟರ್ ಬಫರ್ ಜೋನ್ ಮಾಡುವ ಚಿಂತನೆ ಇದೆ ಎಂದ ಅವರು, ನಗರದಲ್ಲಿ ತ್ಯಾಜ್ಯ ಸಂಸ್ಕರಣೆಗಾಗಿ ಆರು ಸಂಸ್ಕರಣಾ ಘಟಕಗಳು ಇವೆ ಎಂದು ಮಾಹಿತಿ ನೀಡಿದರು.

ಪರಿಶೀಲನೆ ವೇಳೆ ಶಾಸಕ ಸೋಮಶೇಖರ್, ಮೇಯರ್ ಸಂಪತ್‍ರಾಜ್, ಆಡಳಿತ ಪಕ್ಷದ ನಾಯಕ ಶಿವರಾಜ್, ಬಿಬಿಎಂಪಿ ಆಯುಕ್ತ ಮಹೇಶ್ವರ್ ರಾವ್, ಜಂಟಿ ಆಯುಕ್ತ ಸರ್ಫರಾಜ್ ಖಾನ್ ಮತ್ತಿತರರು ಸಾಥ್ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ