ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಇಳಿಮುಖವಾದ ಕುಂಭದ್ರೋಣ ಮಳೆ

 

ಬೆಂಗಳೂರು, ಜೂ.15-ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಿರಂತವಾಗಿ ಬೀಳುತ್ತಿದ್ದ ಕುಂಭದ್ರೋಣ ಮಳೆ ಇಳಿಮುಖವಾಗಿದ್ದು, ಇನ್ನೊಂದು ವಾರ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಹಾಗೂ ಮಲೆನಾಡಿನಲ್ಲಿ ನಿನ್ನೆಯಿಂದ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ, ಹಗುರದಿಂದ ಸಾಧಾರಣ ಮಳೆ ಮುಂದುವರೆಯಲಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಬಿದ್ದ ಮಳೆಯಿಂದ ಕರಾವಳಿ ಹಾಗೂ ಮಲೆನಾಡು ಭಾಗದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಜಲಾಶಯಗಳಲ್ಲಿ ನೀರಿನ ಹರಿವು ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಯಿತು ಎಂದರು.
ಜೂ.22ರವರೆಗೂ ಹೆಚ್ಚಿನ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿಲ್ಲ. ಆದರೆ, 22ರ ನಂತರ ಮಳೆ ಹೆಚ್ಚಾಗುವ ಸಾಧ್ಯತೆಗಳು ಕಂಡು ಬರುತ್ತಿವೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ