ತುಷಾರ್ ಗಿರಿನಾಥ್ ನಗರಾಭಿವೃದ್ಧಿ ಇಲಾಖೆಗೆ ವರ್ಗಾವಣೆ

 

ಬೆಂಗಳೂರು, ಜೂ.15- ಮುಖ್ಯಮಂತ್ರಿಯವರ ಮುಖ್ಯ ಕಾರ್ಯದರ್ಶಿ-2 ತುಷಾರ್ ಗಿರಿನಾಥ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಗರಾಭಿವೃದ್ಧಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಕೇಂದ್ರ ನಿಯೋಜನೆಯಿಂದ ಹಿಂದೆ ಇರುವ ಹಿರಿಯ ಐಎಎಸ್ ಅಧಿಕಾರಿ ಡಾ.ಎಸ್.ಸೆಲ್ವಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಯವರ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ