
ನವದೆಹಲಿ:ಜೂ-15: ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆಗೈಯಲು ಮಾವೋವಾದಿಗಳು ಸಂಚು ರೂಪಿಸಿದ್ದರು ಎಂಬ ವರದಿಗಳ ಬೆನ್ನಲ್ಲೇ, ರಾಜಧಾನಿ ದೆಹಲಿಯಲ್ಲಿನ ಪ್ರಧಾನಿ ಮೋದಿಯವರ ಮನೆ ಮೇಲೆ ಇತ್ತೀಚೆಗಷ್ಟೇ ಯುಎಫ್ಒ (ಆನ್ ಐಡೆಂಟಿಫೈಡ್ ಫ್ಲೈಯಿಂಗ್ ಆಬ್ಜೆಕ್ಟ್) ಪತ್ತೆಯಾಗಿ ಆತಂಕ ಸೃಷ್ಟಿಸದ್ದ ಘಟನೆ ಇದೀಗ ಬೆಳಕಿಗೆ ಬಂದಿದೆ.
ಯುಎಫ್ಒ ಪತ್ತೆಯಾದ ಬೆನ್ನಲ್ಲೇ ಇಡೀ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಸಿದ ಅಧಿಕಾರಿಗಳು, ತೀವ್ರ ತಪಾಸಣೆ ನಡೆಸಿದ್ದಾರೆ. ಈ ವೇಳೆ ಯಾವುದೇ ರೀತಿಯ ಅಪಾಯಕಾರಿ ವಸ್ತುಗಳು ಕಂಡು ಬಂದಿಲ್ಲ ಎಂದು ತಿಳಿದುಬಂದಿದೆ.
ಯುಎಫ್ಒ ಪತ್ತೆಯಾಗಿದ್ದನ್ನು ಪೊಲೀಸರು ಖಚಿತಪಡಿಸಿದ್ದರೂ, ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಮಾಹಿತಿಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.
ಪ್ರಧಾನಿ ಮೋದಿ ನಿವಾಸದ ಸುತ್ತಮುತ್ತಲಿನ 2 ಕಿ.ಮೀ ವ್ಯಾಪ್ತಿಯ ಪ್ರದೇಶವ್ನು ಹಾರಾಟ ನಿಷಿದ್ಧ ವಲಯ ಎಂದು ಘೋಷಿಸಲಾಗಿದೆ. ಆದರೆ, ಜೂ.7 ರ ಸಂಜೆ 7.30ರ ವೇಳೆ ಮೋದಿ ಮನೆ ಮೇಲೆ ಯುಎಫ್ಒ ಹಾರಾಟ ಕಂಡು ಬಂದಿತ್ತು.
ಕೂಡಲೇ ಪ್ರಧಾನಿ ಭದ್ರತೆಯ ಉಸ್ತುವಾರಿ ಹೊತ್ತಿರುವ ಎಸ್’ಪಿಜಿ ಸಿಬ್ಬಂದಿ ದೆಹಲಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಅವರು ಸ್ಥಳಕ್ಕೆ ಧಾವಿಸುವುದರ ಒಳಗೆ ಯುಎಫ್ಒ ನಾಪತ್ತೆಯಾಗಿತ್ತು. ಆದರೂ ಕೂಡಲೇ ಇಡೀ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಿ, ಎನ್ಎಸ್’ಜಿ, ಸಿಐಎಸ್ಎಫ್, ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿಮಗಕ್ಕೆ ಮಾಹಿತಿ ರವಾನಿಲಾಗಿತ್ತು. ಮೋದಿ ನಿವಾಸದ ಸುತ್ತಮುತ್ತಲ ಪ್ರದೇಶಕ್ಕೆ ಹೆಚ್ಚಿನ ಪೊಲೀಸ್ ಪಡೆಯನ್ನು ರವಾನಿಸಲಾಗಿತ್ತು. ನಂತರ ಇಡೀ ಪ್ರದೇಶವನ್ನು ತಪಾಸಣೆ ನಡೆಸಲಾಗಿತ್ತು. ಈ ವೇಳೆ ಯಾವುದೇ ರೀತಿಯ ಅಪಾಯಕಾರಿ ವಸ್ತುಗಳು ಕಂಡು ಬಂದಿರಲಿಲ್ಲ.
UFO sighted, near Narendra Modi’s Delhi residence