
ಮೈಸೂರು, ಜೂ.16- ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಮಗುವಿನ ಜನನಕ್ಕೆ ಕಾರಣನಾದ ವ್ಯಕ್ತಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ನಂಜನಗೂಡು ತಾಲ್ಲೂಕು ಹೊರಳ್ಳಿ ಗ್ರಾಮದ ಮಹದೇವಸ್ವಾಮಿ (31) ಶಿಕ್ಷೆಗೆ ಒಳಗಾಗಿದ್ದಾನೆ. ಆರೋಪಿಗೆ ನ್ಯಾಯಾಲಯವು 7 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ಆರೋಪಿ 2012ರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ. ಈಕೆ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಡಿಎನ್ಎ ಪರೀಕ್ಷೆ ಮೂಲಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಹದೇವಸ್ವಾಮಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.