ಬೆಂಗಳೂರು, ಜೂ.16- ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಾಳೆ ನಡೆಯುವ ನೀತಿ ಆಯೋಗದ ನಾಲ್ಕನೇ ಆಡಳಿತ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ಇಂದು ಸಂಜೆ ದೆಹಲಿಗೆ ತೆರಳುವ ಮುಖ್ಯಮಂತ್ರಿಗಳು ನಾಳೆ ಬೆಳಗ್ಗೆ 9.30ಕ್ಕೆ ರಾಷ್ಟ್ರಪತಿ ಭವನದ ಸಾಂಸ್ಕøತಿಕ ಕೇಂದ್ರದಲ್ಲಿ ನಡೆಯಲಿರುವ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
ನೀತಿ ಆಯೋಗದ ಸಭೆ ಮುಗಿದ ಬಳಿಕ ನಾಳೆ ರಾತ್ರಿ ದೆಹಲಿಯಿಂದ ಬೆಂಗಳೂರಿಗೆ ಮುಖ್ಯಮಂತ್ರಿ ಮರಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.






