ಹೆಚ್.ಡಿ.ಕೋಟೆಯ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ

ನಂಜನಗೂಡು, ಜೂ.16- ಕೇರಳದ ವೈನಾಡಿನಲ್ಲಿ ಕೆಲದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಹೆಚ್.ಡಿ.ಕೋಟೆಯ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.
ಕಳೆದ ಮೂರು ವರ್ಷಗಳಿಂದ ಬತ್ತಿ ಹೋಗಿದ್ದ ಕಪಿಲಾ ನದಿ ಉಕ್ಕಿ ಹರಿಯುತ್ತಿದ್ದು, ಇದರಿಂದ ನಂಜನಗೂಡು ಜನರು ಮತ್ತು ಪ್ರವಾಸಿಗರು ಈ ಮನೋಹರ ದೃಶ್ಯವನ್ನು ಕಂಡು ಕಣ್ತುಂಬಿಸಿಕೊಳ್ಳುತ್ತಿದ್ದಾರೆ.
ಪ್ರವಾಹದ ನೀರು ಮತ್ತು ಸುರಿಯುತ್ತಿರುವ ಮಳೆಯಿಂದ ಈ ಭಾಗದ ನೂರಾರು ಎಕರೆ ಭತ್ತದ ಗದ್ದೆಗಳಿಗೆ ನೀರು ನುಗ್ಗಿದ್ದು, ಫಸಲು ನೀರಿನಲ್ಲಿ ಮುಳುಗಿರುವುದರಿಂದ ಕೆಲ ರೈತರು ಕಂಗಾಲಾಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ