ಕಾಶ್ಮೀರದಲ್ಲಿ ನಡೆಯುತ್ತಿರುವ ರಕ್ತಪಾತಕ್ಕೆ ಕೇಂದ್ರ ಎನ್ ಡಿ ಎ ಸರ್ಕಾರವೇ ಹೊಣೆ: ಶಿವಸೇನೆ

ಮುಂಬೈ:ಜೂ-16: ಕಣಿವೆ ರಾಜ್ಯ ಕಾಶ್ಮೀರದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ, ರಕ್ತಪಾತಗಳಿಗೆ ಕೇಂದ್ರದಲ್ಲಿರುವ ಎನ್ ಡಿಎ ಸರ್ಕಾರವೇ ಹೊಣೆ ಎಂದು ಶಿವಸೇನೆ ಆರೋಪಿಸಿದೆ.

ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಂಜಾನ್ ತಿಂಗಳಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ನಡೆಸದಿರಲು ನಿರ್ಧರಿಸಿದ್ದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ಭಾರತದ ಈ ನಿರ್ಧಾರದಿಂದ ಪಾಕಿಸ್ತಾನ ಅನುಚಿತ ಲಾಭ ಪಡೆಯಲು ಯತ್ನಿಸಿದೆ ಎಂದು ಶಿವಸೇನೆ ಹೇಳಿದೆ.

ಭಯೋತ್ಪಾದಕರು ನಡೆಸಿರುವ ರಕ್ತಪಾತಕ್ಕೆ ಕೇಂದ್ರ ಸರ್ಕಾರದ ನಿರ್ಧಾರವೇ ಕಾರಣವಾಗಿದೆ. ನಮ್ಮ ಸರ್ಕಾರ ರಂಜಾನ್ ತಿಂಗಳಲ್ಲಿ ಸೇನಾ ದಾಳಿ ನಡೆಸದಿರಲು ತೀರ್ಮಾನಿಸಿತ್ತು. ಆದರೆ ಪಾಕಿಸ್ತಾನ ಅದಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ ಎಂದು ಹೇಳಿದ್ದು, ಕಾಶ್ಮೀರದಲ್ಲಿ ರಕ್ತಪಾತ ನಡೆಯುತ್ತಿದ್ದರೂ ಪ್ರಧಾನಿ ಮೋದಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

Modi govt, responsible for bloodbath in Kashmir, Shiv Sena

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ