ಸೋಮವಾರದಿಂದ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವರ್ಗಾವಣೆಯ ಕೌನ್ಸಿಲಿಂಗ್ ಆರಂಭ

 

ಬೆಂಗಳೂರು, ಜೂ.16- ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವರ್ಗಾವಣೆಯ ಕೌನ್ಸಿಲಿಂಗ್ ಸೋಮವಾರದಿಂದ ಆರಂಭವಾಗಲಿದೆ.
ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಮಲ್ಲೇಶ್ವರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೂ.18ರಂದು ಪ್ರಾಂಶುಪಾಲರ ಕೋರಿಕೆ ವರ್ಗಾವಣೆಯ ಕೌನ್ಸಿಲಿಂಗ್ ನಡೆಯಲಿದೆ. ಜತೆಗೆ ಉಪನ್ಯಾಸಕರ ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ನಡೆಸಲಾಗುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಜೂ.21ರಂದು ಐಚ್ಚಿಕ ಕನ್ನಡ, ಸಂಸ್ಕøತ, ಹಿಂದಿ, ಉರ್ದು, ಶಿಕ್ಷಣ, ತರ್ಕಶಾಸ್ತ್ರ, ಭೂಗೋಳ ಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ, ಕನ್ನಡ, ಗಣಿತ ಶಾಸ್ತ್ರ ಉಪನ್ಯಾಸಕರ ಕೌನ್ಸಿಲಿಂಗ್ ನಡೆಯಲಿದೆ.

ಜೂ.22ರಂದು ಇತಿಹಾಸ, ಭೌತಶಾಸ್ತ್ರ, ಜೂ.23ರಂದು ರಾಜ್ಯಶಾಸ್ತ್ರ, ವ್ಯವಹಾರ ಅಧ್ಯಯನ, ರಾಸಾಯನಶಾಸ್ತ್ರ, ಸಮಾಜ ಶಾಸ್ತ್ರ, ಜೀವಶಾಸ್ತ್ರದ ಉಪನ್ಯಾಸಕರ ಕೌನ್ಸಿಲಿಂಗ್ ನಡೆದರೆ, ಜೂ.24ರಂದು ಇಂಗ್ಲಿಷ್ ಹಾಗೂ ಅರ್ಥಶಾಸ್ತ್ರ ಉಪನ್ಯಾಸಕರ ಕೌನ್ಸಿಲಿಂಗ್ ನಡೆಯಲಿದೆ.
ಉಪನ್ಯಾಸಕರ ಹುದ್ದೆಯಿಂದ ಪ್ರಾಂಶುಪಾಲರ ಹುದ್ದೆಗೆ ಮುಂಬಡ್ತಿ ಹೊಂದಿರುವವರು ಕಡ್ಡಾಯವಾಗಿ ಕೌನ್ಸಿಲಿಂಗ್‍ನಲ್ಲಿ ಹಾಜರಾಗಿ ಸ್ಥಳ ಆಯ್ಕೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಬಡ್ತಿ ರದ್ದುಗೊಳಸಲು ಸರ್ಕಾರಕ್ಕೆ ಶಿಫಾರಸು ಮಾಡುವ ಎಚ್ಚರಿಕೆಯನ್ನು ನೀಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ