ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ; ರಾಮಲಿಂಗಾರೆಡ್ಡಿ ಸ್ಪಷ್ಟನೆ

Varta Mitra News

ಬೆಂಗಳೂರು, ಜೂ.16-ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಂದ ತೆರವಾಗುವ ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ತಮ್ಮ ಹೆಸರು ಕೇಳಿ ಬಂದಿರಬಹುದು. ಆದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿಲ್ಲ. ಜೊತೆಗೆ ಸಚಿವ ಸ್ಥಾನದ ಆಕಾಂಕ್ಷಿಯೂ ಅಲ್ಲ ಎಂದು ಸುದ್ದಿಗಾರರಿಗೆ ಸ್ಪಷ್ಟಪಡಿಸಿದ್ದಾರೆ.
ತಾವು ಯಾವುದನ್ನೂ ಕೇಳಿ ಪಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ