ವಿಧಾನಪರಿಷತ್‍ನ 9 ಸದಸ್ಯರಿಗೆ ಸೋಮವಾರ ಬೀಳ್ಕೊಡುಗೆ ಸಮಾರಂಭ

 

ಬೆಂಗಳೂರು,ಜೂ.16-ನಿವೃತ್ತಿಯಾಗುತ್ತಿರುವ ವಿಧಾನಪರಿಷತ್‍ನ 9 ಸದಸ್ಯರಿಗೆ ಸೋಮವಾರ ಬೀಳ್ಕೊಡುಗೆ ಸಮಾರಂಭವನ್ನು ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಧಾನಪರಿಷತ್ ಸದಸ್ಯತ್ವದಿಂದ ಬಿ.ಜೆ.ಪುಟ್ಟಸ್ವಾಮಿ, ಎಂ.ಆರ್.ಸೀತಾರಾಮ್, ಮೋಟಮ್ಮ , ಸೋಮಣ್ಣ ಬೇವಿನಮರದ, ರಘುನಾಥ್ ರಾವ್ ಮಲ್ಕಾಪುರೆ, ಡಿ.ಎಸ್.ವೀರಯ್ಯ, ಭಾನುಪ್ರಕಾಶ್, ಸಿ.ಎಂ.ಇಬ್ರಾಹಿಂ, ಕೆ.ಗೋವಿಂದರಾಜು ಅವರು ನಾಳೆ ನಿವೃತ್ತಿಯಾಗುತ್ತಿದ್ದು, ಸೋಮವಾರ ಬೀಳ್ಕೊಡುಗೆ ಸಮಾರಂಭವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.

ನಾಳೆ ನಿವೃತ್ತಿಯಾಗಬೇಕಿದ್ದ ಜೆಡಿಎಸ್‍ನ ವಿಧಾನಪರಿಷತ್ ಸದಸ್ಯ ಸಯ್ಯದ್ ಮುದೀರ್ ಆಗಾ ಇತ್ತೀಚೆಗೆ ಮೃತಪಟ್ಟಿದ್ದರು. ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್‍ನ 11 ಸದಸ್ಯ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗಿದೆ.

ಅವಿರೋಧವಾಗಿ ಆಯ್ಕೆಯಾಗಿರುವ ಅರವಿಂದಕುಮಾರ್ ಅರಳಿ, ಸಿ.ಎಂ ಇಬ್ರಾಹಿಂ, ಕೆ.ಗೋವಿಂದರಾಜ್, ಡಾ.ತೇಜಸ್ವಿನಿಗೌಡ, ಎಸ್.ಎಲ್.ಧರ್ಮೇಗೌಡ, ಕೆ.ಪಿ.ನಂಜುಂಡಿ ವಿಶ್ವಕರ್ಮ, ಬಿ.ಎಂ.ಫಾರೂಕ್, ರಘುನಾಥ್ ರಾವ್ ಮಲ್ಕಾಪುರೆ, ಎನ್.ರವಿಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್‍ಕುಮಾರ್ ಅವರು ಜೂನ್ 18ರಂದು ವಿಧಾನಪರಿಷತ್‍ನ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನಾಳೆ ನಿವೃತ್ತಿಯಾಗುವ ರಘುನಾಥ್ ರಾವ್ ಮಲ್ಕಾಪುರೆ, ಸಿ.ಎಂ.ಇಬ್ರಾಹಿಂ, ಕೆ.ಗೋವಿಂದರಾಜ್ ಅವರು ಮತ್ತೆ ವಿಧಾನಪರಿಷತ್‍ಗೆ ಚುನಾಯಿತರಾಗಿದ್ದಾರೆ.
ವಿಧಾನಸೌಧದ ಬಾಂಕ್ವೆಟ್ ಹಾಲ್‍ನಲ್ಲಿ ನಡೆಯುವ ಸಮಾರಂಭದಲ್ಲಿ ನೂತನ ಸದಸ್ಯರಿಗೆ ಅýಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನವನ್ನು ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಬೋýಸಲಿದ್ದಾರೆ ಎಂದು ಅýಕೃತ ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ