ಬಿಜೆಪಿಯೇತರ ಮುಖ್ಯಮಂತ್ರಿಗಳಿಗೆ ಕೇಜ್ರಿವಾಲ್ ಭೇಟಿಗೆ ಅವಕಾಶ ನಿರಾಕರ್ಸಿದ ಲೆಫ್ಟಿನೆಂಟ್ ಗವರ್ನರ್

ನವದೆಹಲಿ:ಜೂ-17: ದೆಹಲಿ ಮುಖ್ಯಮಂತ್ರಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭೇಟಿಗೆ ಬಿಜೆಪಿಯೇತರ ಮುಖ್ಯಮಂತ್ರಿಗಳಿಗೆ ಲೆಫ್ಟಿನೆಂಟ್ ಗವರ್ನರ್ ಅವರು ಅವಕಾಶ ನಿರಾಕರಣೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕರ್ನಾಟಕ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿ ಕೇಜ್ರಿವಾಲ್ ಅವರ ಪತ್ನಿಯೊಂದಿಗೆ ಮಾತುಕತೆ ನಡೆಸಿದರು.

ನಂತರ ಕೇಜ್ರಿವಾಲ್ ಅವರ ಮನೆಯಲ್ಲೇ ಸುದ್ದಿಗೋಷ್ಠಿ ನಡೆಸಿದ ಮಮತಾ ಬ್ಯಾನರ್ಜಿ ಕೇಜ್ರಿವಾಲ್ ಅವರ ಭೇಟಿಗೆ ಅವಕಾಶ ನೀಡಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರಿಗೆ ಪತ್ರ ಬರೆದಿರುವುದಾಗಿ ಹೇಳಿದ್ದಾರೆ. ಇದೇ ವೇಳೆ ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಕಿಡಿಕಾರಿದ್ದು ಆಡಳಿತ ನಡೆಸಲು ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಬೇಕು ಎಂದು ಕೇಳಿದ್ದಾರೆ.

ಈ ವೇಳೆ ಮಾತನಾಡಿದ ಕರ್ನಾಟಕ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು, ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ಕೇಜ್ರಿವಾಲ್ ಧರಣಿ ನಡೆಸುತ್ತಿದ್ದರು ಇದಕ್ಕೆ ಲೆ. ಗವರ್ನರ್ ಅವರು ಸ್ಪಂಧಿಸುತ್ತಿಲ್ಲ. ಕೂಡಲೇ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕು ಎಂದು ಒತ್ತಾಯಿಸಿದರು.

ಕೇಜ್ರಿವಾಲ್ ಜತೆಗೆ ದೆಹಲಿಯ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತು ಮಂತ್ರಿಗಳಾದ ಸತ್ಯೇಂದರ್ಜೈನ್ ಮತ್ತು ಗೋಪಾಲ್ ರೈ ಸಹ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ಲೆ. ಗವರ್ನರ್ ತಾವು ಐಎಎಸ್ ಅಧಿಕಾರಿಗಳು ತಮ್ಮ “ಮುಷ್ಕರ” ವನ್ನು ಅಂತ್ಯಗೊಳಿಸಲು ಆದೇಶಿಸಬೇಕು, ಮನೆಬಾಗಿಲಿಗೆ ಪಡಿತರ ವ್ಯವಸ್ಥೆ ಜಾರಿಗೆ ಅವಕಾಶ ನೀಡಬೇಕೆಂದು ಅವರು ಬೇಡಿಕೆ ಇಟ್ಟಿದ್ದಾರೆ.
ಜೈನ್ ಹಾಗೂ ಸಿಸೋಡಿಯಾ ಅನುಕ್ರಮವಾಗಿ ಮಂಗಳವಾರ ಮತ್ತು ಬುಧವಾರದಿಂದ ಎಲ್-ಜಿ ಕಛೇರಿಯ ವೇಟಿಂಗ್ ರೂಮಿನಲ್ಲಿ ಉಪವಾಸ ಸತ್ಯಾಗ್ರಹದಲ್ಲಿ ತೊಡಗಿದ್ದಾರೆ. ಮುಖ್ಯಮಂತ್ರಿ ಕೇಜ್ರಿವಾಲ್ ಅಧಿಕಾರಿಗಳ ಮುಷ್ಕರ ಸಂಬಂಧ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಸಮಸ್ಯೆ ಬಗೆಹರಿಸುವಂತೆ ಕೋರಿದ್ದಾರೆ.
‘Centre restricting federal system’: CMs of West Bengal, Andhra, Kerala, Karnataka support Delhi CM Arvind Kejriwal’s protest

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ