ವಿಜಯಪುರ:ಜೂ-೧೭: ಭೀಮಾತೀರದ ಹಂತಕ ಗಂಗಾಧರನ ನಿಗೂಢ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪ ಹೊತ್ತಿದ್ದ ಚಡಚಣ ಪಿಎಸ್ಐ ಗೋಪಾಲ ಹಳ್ಳೂರರನ್ನು ಪೊಲೀಸರು ಬಂಧಿಸಿದ್ದಾರೆ.
ಸಿಐಡಿ ಮತ್ತು ಸ್ಥಳೀಯ ಅಧಿಕಾರಿಗಳು ಗೋಪಾಲ ಹಳ್ಳೂರರನ್ನು ವಿಜಯಪುರ ಜಿಲ್ಲೆಯ ಇಂಡಿ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ವಾದ ಪ್ರತಿವಾದವನ್ನು ಆಲಿಸಿದ ಕೋರ್ಟ್ ಜೂನ್ 28ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.
ಕೋರ್ಟ್ ಆದೇಶದ ಪ್ರಕಾರ ಹಳ್ಳೂರರನ್ನು ವಿಜಯಪುರ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ. ಇವರೊಂದಿಗೆ ಪೇದೆಗಳಾದ ಜಾದವ್, ನಾಯಕ್ವಾಡಿ ಮತ್ತು ರೂಗಿ ಎಂಬವರನ್ನೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
Bhima teerada Hantaka, Gangadhar Murder Case,Chadchan PSI Gopala Hallura, Judicial Custody