ಬೆಂಗಳೂರು, ಜೂ.17- ರಾಷ್ಟ್ರೀಯ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವುದು, ಬೆಳೆ ವಿಮೆ ಯೋಜನೆ ರೈತರಿಗೆ ವ್ಯಕ್ತಿಗತವಾಗಿ ಸಿಗುವಂತೆ ಮಾಡುವುದು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಪಿಸಿಸಿ ಕಿಸಾನ್ ಘಟಕ ನಾಳೆ ಮತ್ತು ನಾಡಿದ್ದು ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲು ಮುಂದಾಗಿದೆ.
ಕಳಸಾಬಂಡೂರಿ ನೀರಾವರಿ ಯೋಜನೆ ರಾಜ್ಯದ ರೈತರಿಗೆ ಅನುಕೂಲವಾಗುವಂತೆ ಅನುಷ್ಠಾನ ಮಾಡಬೇಕು. ಕೇಂದ್ರ ಸರ್ಕಾರ ಅನುಷ್ಠಾನ ಮಾಡಿದ ಗೋರಕ್ ವರದಿ ಅನುಷ್ಠಾನಕ್ಕೆ ತರಬೇಕು. ಕಾಫಿ, ಕಾಳು ಮೆಣಸು ಹಾಗೂ ತೋಟಗಾರಿಕೆ ಬೆಳೆಗಾರರ ನೆರವಿಗೆ ಕೇಂದ್ರ ಮುಂದಾಗಬೇಕೆಂದು ಆಗ್ರಹಿಸಿ ಪ್ರಧಾನಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮಿಗಾ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಿಸಾನ್ ಘಟಕದ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.