
ನವದೆಹಲಿ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಸತ್ಯೇಂದ್ರ ಜೈನ್ ಅವರ ಕೆಟೋನ್ ವರದಿ ನೋಡಿದ ಮೇಲೆ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಅವರ ರಕ್ತದೊತ್ತಡ ಸಹಜವಾಗಿದೆ. ಉಸಿರಾಟದ ಸಮಸ್ಯೆಯಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಎಲ್ ಎನ್ ಜೆಪಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಮಧ್ಯಾಹ್ನ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿತ್ತು. ಆದರೆ ಸಂಜೆಯ ವೇಳೆಗೆ ತಲೆನೋವು, ವಾಕರಿಕೆ ಮತ್ತು ಉಸಿರಾಟದ ತೊಂದರೆ ಕಾಣಸಿಕೊಂಡಿತ್ತು,
ನಮ್ಮ ಮೂವರು ವಿಶೇಷ ತಜ್ಞರ ತಂಡ ಬೆಳಗ್ಗೆ ಮತ್ತು ಸಂಜೆ ಪ್ರತಿಭಟನಾನಿರತ ಸಚಿವರ ಆರೋಗ್ಯ ಪರೀಕ್ಷೆ ನಡೆಸುತ್ತಿದ್ದು ಜೈನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.