ಲಾರಿ ಮತ್ತು ಟೆಂಪೋ ಡಿಕ್ಕಿ ತಾಯಿ-ಮಗ ಸಾವು

ಹಾಸನ, ಜೂ.18- ಪೈಪ್ ತುಂಬಿದ್ದ ಲಾರಿಗೆ ಹಿಂಬದಿಯಿಂದ ಮಿನಿ ಟೆಂಪೆÇೀ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬಳಿ ನಡೆದಿದೆ. ಬೆಂಗಳೂರು ಮೂಲದ ಶಹತಾಜ್ (25), ಪುತ್ರ ಉಮರ್ (3) ಮೃತಪಟ್ಟ ತಾಯಿ-ಮಗ. ಒಂದೇ ಕುಟುಂಬದ 10 ಮಂದಿ ಹಾಸನದ ಜಾವಗಲ್ ದರ್ಗಾಕ್ಕೆ ಮಿನಿ ಟೆಂಪೆÇೀದಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಕಬ್ಬಿಣದ ನೀರಿನ ಪೈಪ್‍ಗಳನ್ನು ತುಂಬಿದ್ದ ಲಾರಿಗೆ ಹಿಂಬದಿಯಿಂದ ಮಿನಿ ಟೆಂಪೆÇೀ ಡಿಕ್ಕಿ ಹೊಡೆದ ಪರಿಣಾಮ ಕ್ಯಾಬಿನ್‍ನಲ್ಲಿ ಕುಳಿತಿದ್ದ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿದರೆ, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಹತಾಜ್ ಪತಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಚನ್ನರಾಯಪಟ್ಟಣ ಟ್ರಾಫಿಕ್ ಸಂಚಾರಿ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ