ಶಿಕ್ಷಣ ಸಚಿವ ಎನ್.ಮಹೇಶ್ ಮಹಾರಾಜ ಶಾಲೆಗೆ ಬೇಟಿ, ದಾಖಲಾತಿ ಪರೀಶಿಲನೆ

ಮೈಸೂರು, ಜೂ.18- ನಗರದ ಜೆ.ಎಲ್.ಬಿ.ರಸ್ತೆಯಲ್ಲಿರುವ ಸರ್ಕಾರಿ ಮಹಾರಾಜ ಪ್ರೌಢಶಾಲೆಗೆ ಇಂದು ಬೆಳಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಅವರು ಭೇಟಿ ನೀಡಿ ದಾಖಲಾತಿ ಪ್ರಮಾಣ ನೋಡಿ ಒಂದು ಕ್ಷಣ ದಂಗಾದರು.
ಮಹಾರಾಜರ ಕಾಲದಿಂದಲೂ ಈ ಶಾಲೆ ನಡೆದುಕೊಂಡು ಬರುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾಗುತ್ತಿದ್ದರು. ಇದೀಗ ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತವಾಗಿರುವುದನ್ನು ಕಂಡು ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಶಾಲೆಯಲ್ಲಿ ಕೇವಲ 122 ಮಂದಿ ವಿದ್ಯಾರ್ಥಿಗಳು ಮಾತ್ರ ದಾಖಲಾಗಿದ್ದು, ಹನ್ನೊಂದು ಶಿಕ್ಷಕರು ಕಾರ್ಯ ನಿರ್ವಹಿಸುತ್ತಿರುವುದನ್ನೂ ಸಹ ಸಚಿವರು ಇದೇ ವೇಳೆ ಗಮನಿಸಿ ದಾಖಲಾತಿ ಕುಸಿತಕ್ಕೆ ಕಾರಣವೇನೆಂದು ಶಿಕ್ಷಕರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ಶಿಕ್ಷಕರು, ಹೆಚ್ಚಿನ ಸಂಖ್ಯೆಯಲ್ಲಿ ಪ್ರೌಢಶಾಲೆಗಳು ಆರಂಭವಾಗಿರುವುದರಿಂದ ಈ ಶಾಲೆಗೆ ವಿದ್ಯಾರ್ಥಿಗಳು ದಾಖಲಾಗಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿಕ್ಷಕರು ಹಾಗೂ ಅಧಿಕಾರಿಗಳ ಜತೆ ಸಚಿವರು ಸಭೆ ನಡೆಸಿ ಈ ಶಾಲೆಯ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ