
ಚಿತ್ರದುರ್ಗ, ಜೂ.18- ಮರಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ದಾರುಣ ಘಟನೆ ಹೊಸದುರ್ಗ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಂದೆ ಮಂಜುನಾಥ್(40), ಮಗಳು ರಾಜೇಶ್ವರಿ(1) ಮೃತ ದುರ್ದೈವಿಗಳು.
ಇಂದು ಬೆಳಗ್ಗೆ ಹೊಸದುರ್ಗದ ಎನ್.ಜಿ.ಹಳ್ಳಿ ಬಳಿ ಕಾರಿನಲ್ಲಿ ತೆರಳುತ್ತಿದ್ದಾಗ ಕಾರು ಮರಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟರೆ, ಇತರೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಹೊಸದುರ್ಗ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.