ಮಳವಳ್ಳಿ, ಜೂ.18- ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ವ್ಯಕ್ತಿಯೊಬ್ಬ ಕೊಚ್ಚಿಹೋಗಿರುವ ಘಟನೆ ಮುತ್ತತ್ತಿ ನದಿಯಲ್ಲಿ ನಡೆದಿದೆ. ಚಾಮರಾಜನಗರದ ಹನೂರಿನವರಾದ ರಮೇಶ್ (45) ಮೃತ ದುರ್ದೈವಿ.
ಈತ ಕಳೆದ ಒಂದು ವಾರದಿಂದ ಮುತ್ತತ್ತಿಯ ಹೊಟೇಲ್‍ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ನಿನ್ನೆ ಮಧ್ಯಾಹ್ನ ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದಾಗ ನೀರು ಹೆಚ್ಚಾಗಿ ಉಂಟಾದ ಸೆಳೆತದಲ್ಲಿ ಸಿಲುಕಿ ಕೊಚ್ಚಿಹೋಗಿದ್ದಾನೆ. ಈತನ ಪತ್ನಿ ಮಂಜುಳಾ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಹಲಗೂರು ಠಾಣೆ ಪೆÇಲೀಸರು ಕಾಣೆಯಾದ ವ್ಯಕ್ತಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಸ್ಥಳಕ್ಕೆ ಹಲಗೂರು ಪೆÇಲೀಸ್ ಸಬ್‍ಇನ್ಸ್‍ಪೆಕ್ಟರ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.