ಹಾಸನ, ಜೂ.19- ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಪರಿಣಾಮ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಹಳೇಕೋಟೆಯಲ್ಲಿ ನಡೆದಿದೆ.
ಹನುಮನಹಳ್ಳಿ ಗ್ರಾ.ಪಂ. ಸದಸ್ಯ ಮಲ್ಲ (38) ಮೃತಪಟ್ಟ ವ್ಯಕ್ತಿ. ಕಳೆದ ರಾತ್ರಿ ಹೊಳೆನರಸೀಪುರದಿಂದ ಹಾಸನ-ಮೈಸೂರು ಹೆದ್ದಾರಿ ಮೂಲಕ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಹಳೇಕೋಟೆ ಬಳಿ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಳಿಕ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಮಲ್ಲ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಹೊಳೆನರಸೀಪುರ ಠಾಣೆ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.