ವೃದ್ಧೆಗೆ ಕಾರು ಡಿಕ್ಕಿ ಸ್ಥಳದಲ್ಲೇ ಸಾವು

ಚನ್ನಪಟ್ಟಣ, ಜೂ. 19- ರಸ್ತೆ ಬದಿಯಲ್ಲಿ ನಿಂತಿದ್ದ ವೃದ್ಧೆಯೊಬ್ಬರಿಗೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಲಕ್ಷ್ಮಿ (80) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ವೃದ್ಧೆ. ಈಕೆ 11ನೆ ಕ್ರಾಸ್ ಬಳಿ ರಸ್ತೆದಾಟಲು ನಿಂತಿದ್ದಾಗ ಬೆಂಗಳೂರು ಕಡೆಯಿಂದ ಮೈಸೂರಿನತ್ತ ಅತಿವೇಗವಾಗಿ ಬಂದ ಕಾರು ಚಾಲಕನ ಅಜಾಗರೂಕತೆಯಿಂದ ಡಿಕ್ಕಿ ಹೊಡೆದಿದೆ. ಸಂಚಾರಿ ಠಾಣೆ ಪೆÇಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕಾರು ಚಾಲಕನನ್ನು ಬಂಧಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ