ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಸೌಕರ್ಯಾಭಿವೃದ್ಧಿ ಸುಧಾರಣೆ

ನವದಹಲಿ, ಜೂ.19-ದೇಶದಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಸೌಕರ್ಯಾಭಿವೃದ್ಧಿ ಸುಧಾರಣೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ, ಇದಕ್ಕಾಗಿ 1 ಲಕ್ಷ ಕೋಟಿ ರೂ.ಗಳ ನಿಧಿ ಮೀಸಲಿರಿಸಲಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ(ಎಚ್‍ಆರ್‍ಡಿ) ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ತಮ್ಮ ಸಚಿವಾಲಯದ ನಾಲ್ಕು ವರ್ಷಗಳ ಸಾಧನೆ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರಿಗೆ ವಿವರಿಸಿದ ಅವರು, ಮುಂದಿನ ನಾಲ್ಕು ವರ್ಷಗಳಲ್ಲಿ ಇದನ್ನು ಅನುಷ್ಠಾನಗೊಳಿಸಲಾಗುವುದು. ಇದೇ ಉದ್ದೇಶಕ್ಕಾಗಿ ಈಗಾಗಲೇ ಸ್ಥಾಪನೆಯಾಗಿರುವ ಉನ್ನತ ಶಿಕ್ಷಣ ನಿಧಿ ಸಂಸ್ಥೆ(ಎಚ್‍ಇಎಫ್‍ಎ) ಮೂಲಕ ಮುಂದಿನ ನಾಲ್ಕು ವರ್ಷಗಳಲ್ಲಿ ಇದನ್ನು ಅನುಷ್ಠಾನಗೊಳಿಸಲಾಗುವುದು. ಇದಕ್ಕಾಗಿ ಎಚ್‍ಇಎಫ್‍ಇಗೆ 1 ಲಕ್ಷ ಕೋಟಿ ರೂ.ಗಳ ನಿಧಿ ಅಗತ್ಯವಿದೆ ಎಂದರು. 2022ರ ವೇಳೆಗೆ ಉನ್ನತ ಶಿಕ್ಷಣ ವಲಯದಲ್ಲಿ ಮೂಲಸೌಕರ್ಯಾಭಿವೃದ್ಧಿ ನ್ಯೂನತೆಗಳನ್ನು ಸರಿಪಡಿಸಲು ಹಾಗೂ ವ್ಯವಸ್ಥೆ ಸುಧಾರಣೆ ಮಾಡಲು ಕೇಂದ್ರ ಸರ್ಕಾರ ಗುರಿ ಹೊಂದಿದೆ. ಅದಕ್ಕೆ ಪೂರಕವಾಗಿ ಇನ್ನು ನಾಲ್ಕು ವರ್ಷಗಳಲ್ಲಿ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದಾಗಿ ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ