ಜಮ್ಮು-ಕಾಶ್ಮೀರದಲ್ಲಿ ಮುರಿದುಬಿದ್ದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ

ಶ್ರೀನಗರ:ಜೂ-19; ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರ್ಕಾರ ಮುರಿದು ಬಿದ್ದಿದೆ. ಸಮ್ಮಿಶ್ರ ಸರ್ಕಾರದಿಂದ ಬಿಜೆಪಿ ಹೊರ ನಡೆದಿದೆ.

ಬಿಜೆಪಿ ಹಿರಿಯ ಮುಖಂಡ ರಾಮ್‌ ಮಾಧವ್‌ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ.

2014ರಲ್ಲಿ ನಡೆದ ಜಮ್ಮು-ಕಾಶ್ಮೀರದ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿ, ಸುಮಾರು ಎರಡು ತಿಂಗಳ ಕಾಲ ಸರ್ಕಾರ ರಚನೆ ಕಸರತ್ತು ನಡೆಸಿದ ಬಳಿಕ, ತಮ್ಮ-ತಮ್ಮ ಸಿದ್ಧಾಂತಗಳನ್ನು ಬದಿಗೊತ್ತಿ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರ್ಕಾರ ರಚಿಸಿದ್ದವು.

ಪಿಡಿಪಿ ಮುಖ್ಯಮಂತ್ರಿ ಸ್ಥಾನ ಹಾಗೂ ಬಿಜೆಪಿ ಉಪಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಂಡಿದ್ದವು. ಆದರೆ, ಇಂದು ಏಕಾಏಕಿ ಜಮ್ಮು-ಕಾಶ್ಮೀರದ ಮೈತ್ರಿ ಸರ್ಕಾರದಿಂದ ಕೇಂದ್ರದ ಆಡಳಿತಾರೂಢ ಬಿಜೆಪಿ ಹೊರ ಬಂದಿದೆ.

Jammu and Kashmir, Government Crashes,BJP Splits With Mehbooba Mufti

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ