
ಕೊಡಗು, ಜೂ.19-ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ನಾಡ ಪಿಸ್ತೂಲಿನಿಂದ ಗುಂಡು ಹಾರಿಸಿರುವ ಘಟನೆ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ನಾಗೇಶ್ ಎಂಬುವವರು ಕ್ಷುಲ್ಲಕ ಕಾರಣಕ್ಕಾಗಿ ಮಾರಪ್ಪ ಎಂಬುವರ ಮೇಲೆ ನಾಡ ಪಿಸ್ತೂಲಿನಿಂದ 2 ಸುತ್ತು ಗುಂಡು ಹಾರಿಸಿದ್ದಾರೆ. ಅದೃಷ್ಟವಶಾತ್ ಗುಂಡು ಮರಕ್ಕೆ ತಗುಲಿದೆ. ದಾಳಿಯಿಂದ ತಪ್ಪಿಸಿಕೊಂಡು ಮಾದಪ್ಪ ಅಪಾಯದಿಂದ ಪಾರಾಗಿದ್ದಾರೆ. ಫೈರಿಂಗ್ ಮಾಡಿದ ನಾಗೇಶ್ನನ್ನು ಪೆÇಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಭಾಗಮಂಡಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.