ಕ್ಷುಲ್ಲಕ ಕಾರಣಕ್ಕೆ ಪಿಸ್ತೂಲಿನಿಂದ ಹಾರಿದ ಗುಂಡು

ಕೊಡಗು, ಜೂ.19-ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ನಾಡ ಪಿಸ್ತೂಲಿನಿಂದ ಗುಂಡು ಹಾರಿಸಿರುವ ಘಟನೆ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ನಾಗೇಶ್ ಎಂಬುವವರು ಕ್ಷುಲ್ಲಕ ಕಾರಣಕ್ಕಾಗಿ ಮಾರಪ್ಪ ಎಂಬುವರ ಮೇಲೆ ನಾಡ ಪಿಸ್ತೂಲಿನಿಂದ 2 ಸುತ್ತು ಗುಂಡು ಹಾರಿಸಿದ್ದಾರೆ. ಅದೃಷ್ಟವಶಾತ್ ಗುಂಡು ಮರಕ್ಕೆ ತಗುಲಿದೆ. ದಾಳಿಯಿಂದ ತಪ್ಪಿಸಿಕೊಂಡು ಮಾದಪ್ಪ ಅಪಾಯದಿಂದ ಪಾರಾಗಿದ್ದಾರೆ. ಫೈರಿಂಗ್ ಮಾಡಿದ ನಾಗೇಶ್‍ನನ್ನು ಪೆÇಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಭಾಗಮಂಡಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ