ಮೂರೇ ದಿನಗಳಲ್ಲಿ 2 ಕಿ.ಮೀ. ರಸ್ತೆ ನಿರ್ಮಿಸಿದ ಬಿಹಾರ ಮಹಿಳೆಯರು

ಬಂಕಾ(ಬಿಹಾರ): ಸರ್ಕಾರದ ನೆರವಿಲ್ಲದೆ, ಅಧಿಕಾರಿಗಳು ಮನಸು ಮಾಡದೆ ಅಭಿವೃದ್ಧಿ ಕಾರ್ಯಗಳನ್ನು ನಿರೀಕ್ಷಿಸಲಾಗದು. ಆದರೆ, ಸ್ಥಳೀಯರೇ ಅಭಿವೃದ್ಧಿಗೆ ಅಡ್ಡಿಪಡಿಸಿದರೆ ಕೇಳಬೇಕೆ? ಸ್ಥಳೀಯರ ಸಹಕಾರದ ಕೊರತೆಯಿಂದಾಗಿ ಸರ್ಕಾರವೇ ನೆರವೇರಿಸಲು ಸಾಧ್ಯವಾಗದಿದ್ದ ರಸ್ತೆ ನಿರ್ಮಾಣ ಕಾರ್ಯವನ್ನು ಇಲ್ಲಿನ ನಿಮಾ ಎಂಬ ಕುಗ್ರಾಮದ ಮಹಿಳೆಯರು ಮಾಡಿ ತೋರಿಸಿದ್ದಾರೆ.

ರಸ್ತೆ ನಿರ್ಮಾಣ ಕಾರ್ಯಕ್ಕೆ ಸ್ಥಳೀಯ ಭೂ ಮಾಲೀಕರು ಭೂಮಿ ನೀಡದ ಕಾರಣ ಇಲ್ಲಿನ ಅಧಿಕಾರಿಗಳು ರಸ್ತೆ ನಿರ್ಮಾಣ ಕಾರ್ಯವನ್ನು 4 ವರ್ಷಗಳ ಹಿಂದೆಯೇ ನಿಲ್ಲಿಸಿದ್ದರು. ಆದರೆ, ಅವರ ಮನವೊಲಿಸಿರುವ ಹಳ್ಳಿಯ 130 ಮಹಿಳೆಯರು ಕೇವಲ 3 ದಿನಗಳಲ್ಲಿ 2 ಕಿ.ಮೀ ಉದ್ದದ ರಸ್ತೆಯನ್ನು ನಿರ್ಮಿಸಿದ್ದಾರೆ. ಆ ಮೂಲಕ ದೇಶದ ಗಮನವನ್ನೂ ಸೆಳೆದಿದ್ದಾರೆ. ಈ ಬಗ್ಗೆ ದಿ ಟೆಲಿಗ್ರಾಫ್ ನಲ್ಲಿ ವರದಿ ಪ್ರಕಟವಾಗಿದೆ.

2 ಸಾವಿರಕ್ಕೂ ಹೆಚ್ಚು ಜನರಿರುವ ನಿಮಾ ಗ್ರಾಮದಲ್ಲಿ ದಶಕಕ್ಕೂ ಹಿಂದಿನಿಂದ ರಸ್ತೆ ಸಮಸ್ಯೆ ಇದೆ. ಇದರಿಂದಾಗಿ ಶಿಕ್ಷಣದಿಂದ ವಂಚಿತರಾದವರು, ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೆ ಪ್ರಾಣ ಬಿಟ್ಟವರ ಸಂಖ್ಯೆಯೂ ದೊಡ್ಡದಿದೆ. ಹೀಗಿದ್ದರೂ ಸ್ಥಳೀಯರ ಮನವೊಲಿಸಿ ರಸ್ತೆ ನಿರ್ಮಿಸಲು ಅಧಿಕಾರಿಗಳಿಗೆ ಸಾಧ್ಯವಾಗಿರಲಿಲ್ಲ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ