ಮಾಸ್ಕೋ:ಜೂ- 19: ವಿಶ್ವಕಪ್ ಫುಟ್ಬಾಲ್ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಆಟಗಾರರು ಅಪಾಯದಿಂದ ಪಾರಾಗಿದ್ದಾರೆ.
ರಷ್ಯಾದಲ್ಲಿ ಫುಟ್ಬಾಲ್ ವಿಶ್ವಕಪ್ ಟೂರ್ನಿ ನಡೆಯುತ್ತಿದ್ದು, ಸೌದಿ ಅರೇಬಿಯಾ ಆಟಗಾರರು ರೊಸ್ತೊವ್ ಅನ್ ಡಾನ್ ಏರ್ಪೋರ್ಟ್ಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ವಿಮಾನದಲ್ಲಿ ಏಕಾಏಕಿ ತಾಂತ್ರಿಕ ದೋಷ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ.
ಆಟಗಾರರು ಏರ್ಪೋರ್ಟ್ಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ವಿಮಾನದಲ್ಲಿ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಪರಿಣಾಮ ಹಠಾತ್ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ. ಇದರ ನಡುವೆಯೇ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದ್ದು, ಎಲ್ಲಾ ಆಟಗಾರರು ಕೂಡ ಯಾವುದೇ ಗಾಯಗಳಾಗದೆ ಸುರಕ್ಷಿವಾಗಿದ್ದಾರೆ ಎಂದು ಸೌದಿ ಅರೇಬಿಯಾ ತಂಡ ತನ್ನ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಣೆ ಹೊರಡಿಸಿದೆ.
World Cup 2018, Saudi Arabia team, plane catches fire