
ಹುಬ್ಬಳ್ಳಿ- ಆಕಸ್ಮಿಕ ಅಗ್ನಿ ಅವಘಡದಿಂದ ಮನೆಯ ಮುಂದೆ ನಿಲ್ಲಿಸಲಾಗಿದ್ದ ಕಾರೊಂದು ಹೊತ್ತಿ ಉರಿದ ಘಟನೆ ಇಲ್ಲಿನ ವಿದ್ಯಾನಗರದ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ. ಸ್ಟ್ಯಾನ್ಲಿ ಕಾತರಕಿ ಎಂಬುವರಿಗೆ ಸೇರಿದ ಹುಂಡೈ ಎಕ್ಸೇಟ್ ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟ ಕರಕಲಾಗಿದೆ. ಅದೇ ಕಾರಿನಲ್ಲಿ ನಿನ್ನೆ ರಾತ್ರಿ ಇಡೀ ಕುಟುಂಬ ಊಟಕ್ಕೆ ಹೋಗಿ ಬಂದಿದ್ದರು. ರಾತ್ರಿ ಮನೆಯ ಮುಂದೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡು ಕಾರು ಸುಟ್ಟು ಕರಕಲಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಿದಂತೆ ಸ್ಥಳಿಯರು ನೀರು ಎರಚಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದರೆ ಬೆಂಕಿಯ ಕೆನ್ನಾಲಿಗೆಗೆ ಕಾರು ಸುಟ್ಟು ಕರಕಲಾಗಿದೆ.