ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜೊತೆಗಿನ ಮೈತ್ರಿಯನ್ನ ಬಿಜೆಪಿ ಕಡಿದುಕೊಂಡ ಹಿನ್ನೆಲೆಯಲ್ಲಿ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.
ಸರ್ಕಾರ ರಚಿಸಲು ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಸಿಎಂ ಮೆಹಬೂಬಾ ಮುಫ್ತಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಸರ್ಕಾರ ರಚನೆಗೆ ಯಾರೂ ಮುಂದೆ ಬಾರದ ಹಿನ್ನೆಲೆಯಲ್ಲಿ ರಾಜ್ಯಪಾಲ ಎನ್.ಎನ್. ವೋಹ್ರಾ ಅವರು ರಾಜ್ಯಪಾಲರ ಆಳ್ವಿಕೆಗೆ ಶಿಫಾರಸು ಮಾಡಿದ ಪತ್ರವನ್ನು ರಾಷ್ಟ್ರಪತಿ ಕೋವಿಂದ್ ಅವರಿಗೆ ರವಾನಿಸಿದ್ದರು. ಇದಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಹೀಗಾಗಿ ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿಗೆ ಬಂದಿದೆ.