ಪುರಸಭೆಯ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು

ಕುಣಿಗಲ್, ಜೂ.20-ಪಟ್ಟಣದ ಪುರಸಭೆಯ 5ನೇ ವಾರ್ಡ್‍ಗೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ 321 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಜೆಡಿಎಸ್ ಪುರಸಭಾ ಸದಸ್ಯ ಅಶ್ವಕ್ ಅಕಾಲಿಕ ಮರಣದಿಂದ ತೆರವಾಗಿದ್ದ ಸ್ಥಾನಕ್ಕೆ ಮೊನ್ನೆ ಚುನಾವಣೆ ನಡೆದಿದ್ದು, ಕಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಯೂಷಬ್ ಖಾನ್, ಕಾಂಗ್ರೆಸ್‍ನಿಂದ ಜಾಕೀರ್ ಕಣದಲ್ಲಿದ್ದರು. ಆದರೆ ಬಿಜೆಪಿ ಅಭ್ಯರ್ಥಿ ಕಣದಲ್ಲಿರಲಿಲ್ಲ. ಇಂದು ನಡೆದ ಮತ ಎಣಿಕೆಯಲ್ಲಿ ಜೆಡಿಎಸ್ ಅಭ್ಯರ್ಥಿ 405 ಮತ ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ 84 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ತಾಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿ.ಎನ್.ಜಗದೀಶ್ ವಿಜೇತ ಅಭ್ಯರ್ಥಿಯನ್ನು ಅಭಿನಂದಿಸಿ ಕಾರ್ಯಕರ್ತರೊಂದಿಗೆ ವಿಜಯೋತ್ಸವ ಆಚರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ