ಬೆಂಗಳೂರು, ಜೂ.20- ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜೂ.27ರಂದು ಅರಮನೆ ಮೈದಾನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿರುವ ಕೆಂಪೇಗೌಡರ ನಾಲ್ಕು ಗಡಿಗೋಪುರಗಳಿಂದ ಬರುವ ಮೆರವಣಿಗೆಯು ಸ್ವತಂತ್ರ ಉದ್ಯಾನವನದಲ್ಲಿ ಸಮಾವೇಶಗೊಂಡು ಅಲ್ಲಿಂದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ವೇದಿಕೆಗೆ ಗಮಿಸುತ್ತದೆ ಎಂದು ತಿಳಿಸಿದರು.
ಮೆರವಣಿಗೆಯು ಕಲಾತಂಡಗಳು, ಸಾಂಸ್ಕøತಿಕ ವೈಭವದಿಂದ, ಜಾತ್ಯತೀತ, ಪಕ್ಷಾತೀತವಾಗಿ ಕೆಂಪೇಗೌಡರ ಜಯಂತಿ ಆಚರಿಸಲಾಗುತ್ತದೆ. ಎಲ್ಲ ಸಮುದಾಯದ ಕಾರ್ಮಿಕರು, ವರ್ತಕರು, ಕೈಗಾರಿಕಾ ಸಂಘ-ಸಂಸ್ಥೆಗಳು, ಪ್ರತಿನಿಧಿಗಳು, ಶಾಸಕರಿಗೆ, ಪಾಲಿಕೆ ಸದಸ್ಯರಿಗೆ ಆಹ್ವಾನ ನೀಡಬೇಕು ಎಂದು ತಿಳಿಸಿದರು.
ನಾಳೆಯಿಂದಲೇ ಕೆಂಪೇಗೌಡ ಜಯಂತಿ ಬಗ್ಗೆ ಜಾಹೀರಾತು ನೀಡಬೇಕು. ಕಳೆದ ಬಾರಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲಾಗಿತ್ತು. ಜನರು ಹೆಚ್ಚು ಪಾಲ್ಗೊಳ್ಳುವುದರಿಂದ ಅರಮನೆ ಮೈದಾನದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.
ಇದಕ್ಕೂ ಮುನ್ನ ಮಾತನಾಡಿದ ಕವಿ ದೊಡ್ಡರಂಗೇಗೌಡ ಅವರು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ ಭವ್ಯ ಮೂರ್ತಿಯನ್ನು ಸ್ಥಾಪಿಸಬೇಕು. ಒಂದು ವಾರ ಕಾಲ ಆಚರಣೆ ಮಾಡಬೇಕು. ಕೆಂಪೇಗೌಡರ ಪರಿಚಯದ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಬೆಂಗಳೂರು ವಿಶ್ವವಿದ್ಯಾಲಯಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರು ಇಡಬೇಕು ಎಂದು ತಿಳಿಸಿದರು.
ಯುವ ಮುಖಂಡ ತಲಕಾಡು ಚಿಕ್ಕರಂಗೇಗೌಡ ಮಾತನಾಡಿ, ಯಾವುದಾದರೊಂದು ಜಿಲ್ಲೆಗೆ ಕೆಂಪೇಗೌಡರ ಹೆಸರನ್ನು ಇಡಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಂಪೇಗೌಡರ ಹೆಸರಿನಲ್ಲಿ ಪ್ರಶಸ್ತಿ ನೀಡಬೇಕು. ವಿಧಾನಸೌಧದ ಮುಂಭಾಗ ಅಶ್ವಾರೂಢ ಕೆಂಪೇಗೌಡರ ಮೂರ್ತಿಯನ್ನು ಸ್ಥಾಪಿಸಬೇಕು ಎಂದು ತಿಳಿಸಿದರು.
ಮೆಟ್ರೋ ರೈಲಿಗೆ ಕೆಂಪೇಗೌಡರ ಹೆಸರಿಡಬೇಕೆಂಬ ಸಲಹೆ ಮಾಡಲಾಯಿತು. ಸರ್ಕಾರಿ ಶಾಲಾ-ಕಾಲೇಜಿನಲ್ಲಿ ಜಯಂತಿ ಆಚರಿಸಬೇಕೆಂದು ಸಲಹೆ ಮಾಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಜಯಮಾಲಾ, ಮೇಯರ್ ಸಂಪತ್‍ರಾಜ್, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಎನ್.ಬೆಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಪೆÇ್ರ.ನಾಗರಾಜು, ಖಜಾಂಚಿ ಡಿ.ಸಿ.ಕೆ.ಕಾಳೇಗೌಡ, ನಿರ್ದೇಶಕ ಅ.ದೇವೇಗೌಡ ಮತ್ತಿತರರಿದ್ದರು.