ಸರ್ಕಾರದ ಸಂಸ್ಥೆಗಳು ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸಬೇಕು – ಕುಮಾರಸ್ವಾಮಿ ಪ್ರತಿಕ್ರಿಯೆ

 

ಬೆಂಗಳೂರು,ಜೂ.20-ಕೇಂದ್ರ ಸರ್ಕಾರದ ಸಂಸ್ಥೆಗಳು ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸಬೇಕು. ದ್ವೇಷ ಅಥವಾ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನಿಗೆ ಸೀಮಿತವಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಐಟಿ ನೋಟೀಸ್ ಕುರಿತಂತೆ ಪ್ರತಿಕ್ರಿಯೆ ನೀಡಿದರು.
ಸಚಿವರು ಕಾನೂನು ಬದ್ಧವಾಗಿದ್ದರೆ ಅವರ ಬೆಂಬಲಕ್ಕೆ ನಿಲ್ಲುತ್ತೇವೆ. ಅದರ ಬಗ್ಗೆ ಅನುಮಾನ ಬೇಡ ಎಂದು ಹೇಳಿದರು.
ಇದಕ್ಕೂ ಮುನ್ನ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.
ಸಮನ್ವಯ ಸಮಿತಿ ಸಭೆಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸೇರಿದಂತೆ ಪ್ರಸ್ತಾಪಿತ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿ ಮಾರ್ಗದರ್ಶನ ಪಡೆದರು.
ಪ್ರಚಲಿತ ರಾಜಕೀಯ ವಿದ್ಯಮಾನ, ದೆಹಲಿ ಭೇಟಿ ನಾಳೆಯಿಂದ ಆರಂಭವಾಗಲಿರುವ ಬಜೆಟ್ ಪೂರ್ವಭಾವಿ ಸಿದ್ಧತೆ ಮತ್ತಿತರ ಮಹತ್ವದ ವಿಷಯಗಳ ಕುರಿತಂತೆ ಸಲಹೆ ಸೂಚನೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ