ಕಡೂರು, ಜೂ.20- ಪೆಟ್ರೋಲ್-ಡೀಸೆಲ್ ಟ್ಯಾಂಕರ್ ಉರುಳಿ ಸಂಭವಿಸಿದ ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ಇಂದು ಶಾಸಕರಾದ ಬೆಳ್ಳಿ ಪ್ರಕಾಶ್, ತರಿಕೆರೆ ಉಪವಿಭಾಗಾಧಿಕಾರಿ ಸರೋಜಾ ಮತ್ತಿತರ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ನಷ್ಟದ ಪರಿಹಾರ ನೀಡುವ ಭರವಸೆ ನೀಡಿದರು.
ನಿನ್ನೆ ಚಾಲಕನ ನಿಯಂತ್ರಣ ತಪ್ಪಿದ ಪೆಟ್ರೋಲ್-ಡೀಸೆಲ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್‍ನ ಕ್ಲೀನರ್ ಸಜೀವ ದಹನವಾಗಿ ಚಾಲಕನಿಗೆ ಸುಟ್ಟ ಗಾಯಗಳಾಗಿದ್ದಲ್ಲದೆ ಟ್ಯಾಂಕರ್ ಉರುಳಿಬಿದ್ದ ರಭಸಕ್ಕೆ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಸುಮಾರು ಐದಾರು ಮನೆಗಳಿಗೆ ಬೆಂಕಿಯಿಂದ ಹಾನಿಯಾಗಿದ್ದು, ನಾಲ್ಕೈದು ದ್ವಿಚಕ್ರ ವಾಹನಗಳು ಸುಟ್ಟುಹೋಗಿವೆ.
ಅಲ್ಲದೆ, ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ಉಂಟಾಗಿದ್ದು, ನಿನ್ನೆ ಸುಮಾರು 15 ಅಗ್ನಿಶಾಮಕ ದಳಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು. ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
ಇಂಡಿಯನ್ ಆಯಿಲ್ ಕಾಪೆರ್Çರೇಷನ್ ಅಧಿಕಾರಿಗಳು, ವಿಮಾ ಅಧಿಕಾರಿಗಳು, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು, ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ನಷ್ಟದ ಪರಿಹಾರ ನೀಡುವ ಭರವಸೆ ನೀಡಿದರು. ಈ ಭಾಗದಲ್ಲಿ ರಸ್ತೆ ಅಭಿವೃದ್ಧಿ ಪಡಿಸಿದ ನಂತರ ಕಡೂರಿನಿಂದ ಚಿತ್ರದುರ್ಗ, ದಾವಣಗೆರೆ ಭಾಗಕ್ಕೆ ತೆರಳುವ ಎಲ್ಲ ವಾಹನಗಳು ಅತಿ ವೇಗವಾಗಿ ಇದೇ ರಸ್ತೆಯಲ್ಲಿ ಸಂಚರಿಸುತ್ತಿವೆ. ಅನೇಕ ತಿರುವುಗಳಿರುವುದು, ಅಪಘಾತಗಳು ಸಂಭವಿಸುವುದಕ್ಕೆ ಕಾರಣವಾಗಿದೆ. ಅಲ್ಲದೆ, ರಸ್ತೆಯ ತಿರುವುಗಳಲ್ಲಿ ಬ್ಯಾರಿಕೇಡ್‍ಗಳಾಗಲಿ, ಹಂಪ್‍ಗಳಾಗಲಿ, ಸಿಗ್ನಲ್‍ಗಳಾಗಲಿ ಇಲ್ಲದಿರುವುದು ಕೂಡ ಅವಘಡಗಳಿಗೆ ಕಾರಣವಾಗಿದೆ. ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.