ಸಮ್ಮಿಶ್ರ ಸರ್ಕಾರ ಒಳ್ಳೆಯ ಆಡಳಿತ ನೀಡಲಿದೆ – ಪರಮೇಶ್ವರ್

ಚಿತ್ರದುರ್ಗ, ಜೂ.20-ನಮ್ಮ ಸಮ್ಮಿಶ್ರ ಸರ್ಕಾರ ಒಳ್ಳೆಯ ಆಡಳಿತ ನೀಡಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ರಾಜ್ಯದಲ್ಲಿ ಉತ್ತಮ ಅಭಿವೃದ್ಧಿ ಮಾಡುತ್ತೇವೆ ಎಂದು ತಿಳಿಸಿದರು. ರೈತರು, ಮಕ್ಕಳು, ಮಹಿಳೆಯರು ಶಾಂತಿಯಿಂದ ಬದುಕಬೇಕೆಂಬ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಶುಭ ಹಾರೈಸಿದ್ದಾರೆ ಎಂದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 20 ಸಾವಿರ ಪೆÇಲೀಸ್ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ