ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ ಚಾಲಕ ಸಾವು

ದಾವಣಗೆರೆ, ಜೂ.20- ಕಬ್ಬಿಣ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಚಾಲಕ ಹಾಗೂ ಸಹಾಯಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅರಸೀಕೆರೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹನುಮಂತ (35) ಮತ್ತು ಫಕೀರಪ್ಪ (34) ಮೃತಪಟ್ಟ ದುರ್ದೈವಿಗಳು.
ಇವರಿಬ್ಬರು ದಾವಣಗೆರೆಯಿಂದ ಟ್ರ್ಯಾಕ್ಟರ್‍ನಲ್ಲಿ ಕಬ್ಬಿಣ ಲೋಡ್ ಮಾಡಿಕೊಂಡು ಸಂಜೆ 4.30ರಲ್ಲಿ ಹೋಗುತ್ತಿದ್ದಾಗ ಹರಪ್ಪನಹಳ್ಳಿ ತಾಲೂಕಿನ ಅರಸೀಕೆರೆ ಪೆÇಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮಿಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಪರಿಣಾಮವಾಗಿ ಇವರಿಬ್ಬರ ಮೇಲೆ ಕಬ್ಬಿಣದ ಸರಳುಗಳು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಸೀಕೆರೆ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಾದಚಾರಿ ಸಾವು: ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಿದ್ದನೂರು ತಾಂಡಾ ಗ್ರಾಮದ ಮೂರ್ತಿನಾಯಕ್ (41) ಮೃತಪಟ್ಟ ಪಾದಚಾರಿ. ರಾಷ್ಟ್ರೀಯ ಹೆದ್ದಾರಿ-4ರ ಆನಗೋಡು ಬಳಿ ಮೂರ್ತಿನಾಯಕ್ ಎಂಬುವವರು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ವಾಹನ ನಿಲ್ಲಿಸದೆ ಪರಾರಿಯಾಗಿದೆ. ಪರಿಣಾಮವಾಗಿ ಮೂರ್ತಿನಾಯಕ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ಗ್ರಾಮಾಂತರ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ