ಅಮರನಾಥ ಯಾತ್ರಾರ್ಥಿಗಳಿಗೆ ಗರಿಷ್ಠ ಮಟ್ಟದ ಭದ್ರತೆ, ಕೇಂದ್ರ ಸರ್ಕಾರ ಸೂಚನೆ

ಜಮ್ಮು, ಜೂ.20-ವಾರ್ಷಿಕ ಅಮರನಾಥ ಯಾತ್ರೆ ವೇಳೆ ಯಾತ್ರಾರ್ಥಿಗಳಿಗೆ ಗರಿಷ್ಠ ಮಟ್ಟದ ಭದ್ರತೆ ಒದಗಿಸುವಂತೆ ಭದ್ರತಾ ಪಡೆಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ತಿಂಗಳ 28ರಂದು ಅಮರನಾಥ ಯಾತ್ರೆ ಆರಂಭವಾಗಲಿದೆ. 3,880 ಮೀಟರ್‍ಗಳಷ್ಟು ಎತ್ತರದಲ್ಲಿರುವ ಅಮರನಾಥ ಗುಹಾಂತರ ದೇವಾಲಯದಲ್ಲಿ ಹಿಮಲಿಂಗ ದರ್ಶನ ಪಡೆಯಲು ಯಾತ್ರಿಗಳು ಎರಡು ತಿಂಗಳ ಸುದೀರ್ಘ ಪ್ರಯಾಣ ಕೈಗೊಳ್ಳಲಿದ್ದಾರೆ. ಯಾತ್ರಿಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಗರಿಷ್ಠ ಮಟ್ಟದ ಕಟ್ಟೆಚ್ಚರ ವಹಿಸುವಂತೆ ಹಾಗೂ ಯಾತ್ರಿಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಆದೇಶ ನೀಡಲಾಗಿದೆ. ಗಡಿ ನಿಯಂತ್ರಣ ರೇಖೆ(ಎಲ್‍ಒಸಿ) ಮತ್ತು ಅಂತಾರಾಷ್ಟ್ರೀಯ ಗಡಿ (ಐಬಿ) ಮೂಲಕ ಉಗ್ರರ ಯಾವುದೇ ನುಸುಳುವಿಕೆ ಯತ್ನಗಳನ್ನು ಹಿಮ್ಮೆಟ್ಟಿಸಬೇಕು. ಎಲ್ಲ ಗಡಿ ಪೆÇಲೀಸ್ ಠಾಣೆಗಳು, ಔಟ್ ಪೆÇೀಸ್ಟ್‍ಗಳು ಮತ್ತು ತಪಾಸಣಾ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್ ಮಾಡುವಂತೆ ಸೂಚಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ