ಮೊರೆನಾ: ಮಧ್ಯ ಪ್ರದೇಶದ ಮೊರೆನಾದಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, ಸಾವಿನ ಸಂಖ್ಯೆ ಈಗ 15ಕ್ಕೆ ಏರಿಕೆಯಾಗಿದೆ.
ಇಂದು ಬೆಳಗಿನ ಜಾವ ಜೀಪ್ ಗೆ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 12 ಮಂದಿ ದುರ್ಮರಣವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಾಳುಗಳ ಪೈಕಿ ಮೂವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಪ್ರಾಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ವೊಂದಕ್ಕೆ ವೇಗವಾಗಿ ಬರುತ್ತಿದ್ದ ಟ್ರಾಕ್ಟರ್ ರಭಸದಿಂದ ಡಿಕ್ಕಿ ಹೊಡೆದಿದೆ. ಪರಿಣಾಮ 12 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.
ಘಟನೆ ಸಂಭವಿಸುತ್ತಿದ್ದಂತೆಯೇ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು, ಗಾಯಗೊಂಡ ಜನರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದರು.
ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.