ಸಾರಿಗೆ ಬಸ್ ಅಪಘಾತ ಚಾಲಕ ಸೇರಿ ಇಬ್ಬರು ಸಾವು

ದಾವಣಗೆರೆ, ಜೂ.21- ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನ್ಯಾಮತಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಸಾರಿಗೆ ಬಸ್ ನಿಯಂತ್ರಣ ತಪ್ಪಿದ ಕಾರಣ ಈ ಅವಘಡ ಸಂಭವಿಸಿದೆ. ಹೊನ್ನಾಳಿ ತಾಲ್ಲೂಕಿನ ಗೋವಿನಕೋವಿ ಗ್ರಾಮದ ಬಳಿ ಘಟನೆ ನಡೆದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿರುವ ಚಾಲಕ ಹಾಗೂ ಒಬ್ಬ ಪ್ರಯಾಣಿಕನ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ನ್ಯಾಮತಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆ ಸಾಗಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ