ವ್ಯಕ್ತಿಯ ಮೇಲೆ ಆ್ಯಸಿಡ್ ದಾಳಿ

ಬೀದರ್, ಜೂ.21- ವ್ಯಕ್ತಿಯೊಬ್ಬರ ಮೇಲೆ ನಡೆದ ಆ್ಯಸಿಡ್ ದಾಳಿಯಲ್ಲಿ ಮುಖಕ್ಕೆ ಗಾಯವಾಗಿರುವ ಘಟನೆ ಗಾಂಧಿಗಂಜ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹನುಮಾನ್ ನಗರ ನಿವಾಸಿ ಆಸಿಫ್ (35) ದಾಳಿಗೊಳಗಾದ ವ್ಯಕ್ತಿ. ಉತ್ತರ ಪ್ರದೇಶದ ಆಸಿಫ್ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿದ್ದು, ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಗಾಂಧಿಗಂಜ್ ಠಾಣೆ ಪೆÇಲೀಸರು ದುಷ್ಕರ್ಮಿಗಳ ಪತ್ತೆಗೆ ಶೋಧ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ