
ತುಮಕೂರು,ಜೂ.21- ರಸ್ತೆ ದಾಟುತ್ತಿದ್ದ ವಿಕಲಚೇತನ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳ್ಳಂಬೆಳ್ಳ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕದಾಸರಹಳ್ಳಿ ನಿವಾಸಿ ರಾಮಣ್ಣ(40) ಮೃತಪಟ್ಟ ವಿಕಲಚೇತನ. ಇಂದು ಬೆಳಗ್ಗೆ ರಾಮಣ್ಣ ಕಡುಗೇರಿ ಗೇಟ್ ಬಳಿ ರಸ್ತೆ ದಾಟುತ್ತಿದ್ದಾಗ, ಶಿರಾದಿಂದ ತುಮಕೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಾಮಣ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಬ್‍ಇನ್‍ಸ್ಪೆಕ್ಟರ್ ಅವಿನಾಶ್ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತವಾದ ತಕ್ಷಣವೇ ಕಾರು ಚಾಲಕ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ.ಚಾಲಕನಿಗಾಗಿ ಪೆÇಲೀಸರು ಹುಡುಗಾಟ ನಡೆಸುತ್ತಿದ್ದಾರೆ. ಕಳ್ಳಂಬೆಳ್ಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.