ಫಿಫಾ ವಿಶ್ವಕಪ್ 2018ರ ಪಂದ್ಯಾವಳಿಯ ಎಫ್ ಗುಂಪಿನ ಪಂದ್ಯದಲ್ಲಿ ಪೊಲ್ಯಾಂಡ್ ವಿರುದ್ಧ ತಮ್ಮ ತಂಡ ಗೆಲುವು ಸಾಧಿಸಿದ ಖುಷಿಯಲ್ಲಿ ಸೆನೆಗಲ್ ತಂಡದ ಅಭಿಮಾನಿಗಳು ಕ್ರೀಡಾಂಗಣದ ಸ್ಯಾಂಡ್ಗಳಲ್ಲಿ ಬಿದ್ದಿದ್ದ ಕಸವನ್ನು ಸ್ವಚ್ಛಗೊಳಿಸುವ ಮೂಲಕ ತಮ್ಮ ಕ್ರೀಡಾಸ್ಫೂರ್ತಿಯನ್ನು ತೋರಿಸಿದ್ದಾರೆ.
ಫಿಫಾ ವಿಶ್ವಕಪ್ 2018ರ ಪಂದ್ಯಾವಳಿಯಲ್ಲಿ ಇದೇ ಮೊದಲ ಬಾರಿಗೆ ಪಂದ್ಯವನ್ನು ಗೆಲ್ಲುವ ಮೂಲಕ ಸೆನೆಗಲ್ ಮೊದಲ ಆಫ್ರಿಕನ್ ರಾಷ್ಟ್ರ ಎಂಬ ಖ್ಯಾತಿಗೆ ಭಾಜನವಾಗಿತ್ತು.
ಪೋಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಸೆನೆಗಲ್ 2-1 ಗೋಲಿನಿಂದ ಐತಿಹಾಸಿಕ ಗೆಲುವು ಸಾಧಿಸಿತ್ತು. ಸೆನೆಗಲ್ ಪರ ಥಿಯಗೊ ಸಿಯೋನೆಕ್ ಮತ್ತು ಬೇಯ್ ನಿಯಾಂಗ್ ತಲಾ ಒಂದು ಗೋಲು ಬಾರಿಸಿದ್ದರು.
ಐತಿಹಾಸಿಕ ಗೆಲುವಿನೊಂದಿಗೆ ಸೆನೆಗಲ್ ಅಭಿಮಾನಿಗಳ ಹೃದಯ ಗೆದ್ದಿದ್ದು ಇದೇ ಖುಷಿಯಲ್ಲಿ ಅಭಿಮಾನಿಗಳು ಕ್ರೀಡಾಂಗಣದ ಸ್ಯಾಂಡ್ ನಲ್ಲಿ ಬಿದ್ದಿದ್ದ ಕಸವನ್ನು ಸ್ವಚ್ಛಗೊಳಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.